ರಾಜ್ಯ

ಎಚ್‌ಡಿ ರೇವಣ್ಣ ಬಿಡುಗಡೆಗೆ ಸಂಭ್ರಮಿಸುವ ಅಗತ್ಯವಿಲ್ಲ: ಎಚ್‌ಡಿಕೆ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮೇ.13) ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡ ಶಾಸಕ ಎಚ್‌.ಡಿ ರೇವಣ್ಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಚ್‌ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸ ಪಡುವ ಸಮಯವಲ್ಲ. ನಾನು ಸಂತೋಷಪಡುತ್ತೇನೆ ಎಂದು ಭಾವಿಸಬೇಡಿ ಇದೊಂದು ರಾಜ್ಯವೇ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಾನು ರೇವಣ್ಣ ಕುಟುಂಬ ಮುಗಿಸಲು ಪ್ಲಾನ್‌ ಮಾಡುತ್ತಿದ್ದೇನೆ ಎಂದು ಹಲವರು ಹೇಳುತ್ತಿದ್ದಾರೆ. ನಾನು ಯಾವಾಗಲೂ ಸತ್ಯದ ಕಡೆ ಇರುತ್ತೇನೆ. ಮಹಿಳಾ ಸಂತ್ರಸ್ತೆಯರ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಯಾವುದೇ ಮುಲಾಜಿಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪೆನ್‌ಡ್ರೈವ್‌ ಪ್ರಕರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ಇನ್ನೂ ಸಮಯಾವಕಾಶ ಇದೆ ನಾನು ದುಡುಕಲ್ಲ ಎಂದು ಎಚ್‌ಡಿಕೆ ಎಚ್ಚರಿಸಿದ್ದಾರೆ.

ಎಸ್‌ಐಟಿ ವರದಿ ಮಾಹಿತಿ ಸೋರಿಕೆ ಸಂಬಂಧ, ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಕಾಂಗ್ರೆಸ್‌ ಸರ್ಕಾರದ ಭಾಗವಾಗಿ ದೊಡ್ಡ ತಿಮಿಂಗಲದ ಪಾತ್ರವಿದೆ. ಅದನ್ನು ಹಿಡಿದರೆ ಎಲ್ಲಾ ಪ್ರಕರಣ ಹೊರಗೆ ಬರಲಿದೆ ಎಂದು ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಮೇಲೂ ಸಿಟ್ಟಾಗಿರುವ ಎಚ್‌ಡಿಕೆ, ನಿಮಗೂ ತಂದೆ ತಾಯಿ, ಸಹೋದರರಿದ್ದಾರೆ. ಈವರೆಗೆ ನೀವು ಪೆನ್‌ಡ್ರೈವ್‌ ಹಂಚಿದವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನೆ ಮಾಡಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

2 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

2 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

3 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

3 hours ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

3 hours ago