Mysore
20
overcast clouds
Light
Dark

ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಭದ್ರತೆ ಯೋಜನೆಯಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇವಲ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡುತ್ತಿದೆ. ಉಳಿದ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಹಣ ಕೊಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದರೆ ನಾವು ಹೆಚ್ಚಳ ಮಾಡುವ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.