ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಭದ್ರತೆ ಯೋಜನೆಯಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇವಲ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡುತ್ತಿದೆ. ಉಳಿದ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಹಣ ಕೊಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದರೆ ನಾವು ಹೆಚ್ಚಳ ಮಾಡುವ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…