ರಾಜ್ಯ

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಜಮೀರ್ ಅವರು ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಅವರು ಪಕ್ಷದ ಸಿಪಾಯಿ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಚಲವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್‌ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಚಲವಾದಿ ನಾರಾಯಸ್ವಾಮಿ ಅವರು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ. ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19ಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago