darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ.
ದರ್ಶನ್ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿಗೆ ಜೈಲು ಸೇರಿದ್ದಾಗ ದರ್ಶನ್ ಇದೇ ವಿಷಯದಲ್ಲಿ ಜಾಮೀನು ಪಡೆದಿದ್ದರು. 2ನೇ ಬಾರಿ ದರ್ಶನ್ ಪರಪ್ಪನ ಅಗ್ರಹಾರ ಸೇರಿದಾಗಲೂ ದರ್ಶನ್ ಅದೇ ಸಮಸ್ತೆ ಹೇಳಿದ್ದರು. ಆದರೆ ಜಾಮೀನಿಗೆ ಒಪ್ಪದ ಕೋರ್ಟ್ ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಸೂಚನೆ ನೀಡಿತ್ತು.
ಅದರಂತೆ ಆಸ್ಪತ್ರೆಯ ನಾಲ್ವರು ವೈದ್ಯರ ತಂಡ ಪಿಸಿಯೋಥೆರಪಿ ಮಾಡುತ್ತಿದ್ದರು. ಈಗ ತಪಾಸಣೆ ಬಳಿಕ ವರದಿ ಸಲ್ಲಿಸಿರುವ ವೈದ್ಯರ ತಂಡ ದರ್ಶನ್‌ಗೆ ಫಿಸಿಯೋಥೆರಪಿ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಎರಡನೇ ಬಾರಿ ಜೈಲು ಸೇರಿದ ಬಳಿಕ ದರ್ಶನ್ 10ರಿಂದ 12 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…