ರಾಜ್ಯ

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಈ ಬಗ್ಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳು ಮುಷ್ಕರ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭಿಸಲಿದೆ. ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ ತಾಲೂಕಾಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಈ ವೇಳೆ ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆ ಮಾತ್ರ ನೀಡಲು ನಿರ್ಧರಿಸಲಾಗಿದೆ. ಆನಂತರವೂ ಸರ್ಕಾರ ತಮ್ಮ ನಿಲುವಿನಲ್ಲಿ ಬದಲಾವಣೆ ಕಾಣದಿದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸಂಘದ ಪದಾಧಿಕಾರಿಗಳು ಮಹತ್ವದ ಘೋಷಣೆ ಮಾಡಿದರು. ಆರೋಗ್ಯ ಇಲಾಖೆ ನೌಕರರೂ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ಬೆಂಬಲ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ತಿಳಿಸಿದರು.

ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ರವೀಂದ್ರನಾಥ ಎಂ. ಮೇಟಿ ಹಾಗೂ ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬಿ. ಬಳ್ಳಾರಿ ಅವರುಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಕರ್ತವ್ಯದ ಬಳಿಕ ಖಾಸಗಿ ವ್ಯವಸ್ಥೆಯಡಿ ಚಿಕಿತ್ಸೆಗೆ ಅವಕಾಶ ಸೇರಿ 14 ಬೇಡಿಕೆಗಳನ್ನು ಮಾರ್ಚ್ 111 ರೊಳಗೆ ಈಡೇರಿಸುವಂತೆ ಸರ್ಕಾರಿ ವೈದ್ಯಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಪ್ರಮುಖ ಬೇಡಿಕೆಗಳು..

  • 4 ವರ್ಷಗಳಿಂದ ವಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಇಲ್ಲ.
  • 13 ವರ್ಷಗಳಿಂದ  ಜೇಷ್ಠತಾ ಪಟ್ಟಿ ಪರಿಷ್ಕರಣೆ ಆಗಿಲ್ಲ.
  • ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೇಮಕಗೊಂಡ ವೈದ್ಯರಿಗೆ ವೇತನ/ಶುಲ್ಕ ಭತ್ಯೆ ಸಿಗುತ್ತಿಲ್ಲ.
  • ವರ್ಷಪೂರ್ತಿ ವರ್ಗಾವಣೆ ಕಾಯ್ದೆ ತಿದ್ದುಪಡಿ ಮನವಿ ನಿರ್ಲಕ್ಷ್ಯ.
  • ವಿಶೇಷ ಭತ್ಯೆ ಪರಿಷ್ಕರಣೆ ಮಾಡಿಲ್ಲ..
  • ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ ಸೇವೆಗೆ ನಿರ್ಬಂಧ
  • ಆಸ್ಪತ್ರೆಗಳಲ್ಲಿ ಕಾಲಕಾಲಕ್ಕೆ ಔಷಧಗಳ ಕೊರತೆ.
  • ಖಾಲಿ ಹುದ್ದೆಗಳ ಭರ್ತಿ ಮಾಡದೆ ಇರುವುದರಿಂದ ವೈದ್ಯರ ಮೇಲೆ ಹೆಚ್ಚಿದ ಒತ್ತಡ..

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

12 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

12 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

12 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

13 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

13 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

13 hours ago