ರಾಜ್ಯ

ದಾಖಲೆ ಕಳವು ಆರೋಪ: ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ ಡಿಐಜಿ ವರ್ತಿಕಾ ಕಟಿಯಾರ್‌

ಬೆಂಗಳೂರು: ಪೊಲೀಸ್‌ ಇಲಾಖೆಯೂ ಒಂದು ಶಿಸ್ತಿನ ಇಲಾಖೆಯಾಗಿದ್ದು, ಸಮಾಜಕ್ಕೆ ಮಾದರಿಯಾಗುವಂತೆ ಆಡಳಿತ ನಡೆಸಬೇಕು. ಆದರೆ ಈ ಇಲಾಖೆಯೂ ಇದೀಗ ಮಹಿಳಾ ಅಧಿಕಾರಿಗಳ ಜಟಾಪಟಿ ಅಖಾಡವಾಗಿದ್ದು, ಐಜಿಪಿ ರೂಪಾ ಮೌದ್ಗಿಲ್‌ ವಿರುದ್ಧ ಡಿಐಜಿ ವರ್ತಿಕಾ ಕಟಿಯಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಇವರಿಬ್ಬರು ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಭೆ ಮಾಡಿಕೊಂಡು ಸುದ್ದಿಯಾಗಿದ್ದರು. ಆದರೆ ಈಗ ಆ ಗಲಭೆ ಒಂದು ಹಂತ ಮುಂದಕ್ಕೆ ಹೋಗಿದ್ದು, ಐಜಿಪಿ ರೂಪಾ ವಿರುದ್ಧ ರಾಜ್ಯ ಸರ್ಕಾರದ ಸಿಎಸ್‌ ಶಾಲಿನಿ ರಜನೀಶ್‌ ಅವರಿಗೆ ದಾಖಲೆ ಕಳವು ಆರೋಪದ ಮೇಲೆ ವರ್ತಿಕಾ ಅವರು ದೂರು ದಾಖಲಿಸಿದ್ದಾರೆ.

ಇನ್ನು ರೂಪಾ ಅವರು ತಮ್ಮ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಆರೋಪಿಸಿದ್ದಾರೆ.

ಡಿಜಿಪಿ ವರ್ತಿಕಾ ಕಟಿಯಾರ್‌ ದೂರಿನಲ್ಲಿ ಏನಿದೆ?

ಐಜಿಪಿ ರೂಪಾ ಅವರು ತಮ್ಮ ಕಚೇರಿಗೆ ಕೆಳಹಂತದ ಮೂವರು ಅಧಿಕಾರಿಗಳನ್ನು (ಮಲ್ಲಿಕಾರ್ಜುನ್, ಮಂಜುನಾಥ್ ಹಾಗೂ ಕಿರಣ್) ಬಳಸಿ ದಾಖಲೆಗಳನ್ನ ಕಳವು ಮಾಡಿಸಿದ್ದಾರೆ. ಅಲ್ಲದೇ ವಾಟ್ಸ್‌ಆಪ್‌ ಮೂಲಕ ಫೋಟೋ ತೆಗೆಸಿದ್ದು, ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದಲೇ ಈ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

5 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

7 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

7 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

8 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

8 hours ago