ರಾಜ್ಯ

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಇಂದು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ಇಂತಹ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ  ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ  ಪ್ರಯತ್ನಪಡಿ ಎಂದು ಹೇಳಿದರು.

ಕಾರು ಮೇಲೆ ಕಾಗೆ ಕೂತಿದ್ದಕ್ಕೆ ಜ್ಯೋತಿಷಿ ಕರೆಸಿದ್ರಿ?

ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ ಎಂದು ಪ್ರಶ್ನಿಸಿದರು.

ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ ಎಂದು ಕರೆ ನೀಡಿದರು.

ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ ಎಂದು ಟೀಕಿಸಿದರು.

ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಖಡಕ್ ಆಗಿ ನುಡಿದರು.

ನಮ್ಮ ಗ್ಯಾರಂಟಿ ಕಾಪಿ ಮಾಡಿದ ಬಿಜೆಪಿ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ ಎಂದು ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಇದೇ ವೇಳೆ ಶುಭ ಹಾರೈಸಿದರು.

ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ ಎಂದರು.

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಸಚಿವ ಎಂ.ಬಿ.ಪಾಟೀಲ್, ಸನ್ಮಾನಿತರಾದ ಸಚಿವರುಗಳಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಸಚಿವ ಜಮೀರ್ ಅಹಮದ್ ಖಾನ್ ಅವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್, ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

11 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

32 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

1 hour ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago