ಬೆಂಗಳೂರು: ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ನಿನ್ನೆ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಈ ಹಿನ್ನೆಲೆ ನಟ ಡಾಲಿ ಧನಂಜಯ್ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
ನಗರದ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು(ಜನವರಿ.27) ಭೇಟಿ ನೀಡಿದ ಡಾಲಿ ಧನಂಜಯ್ ಶಿವಣ್ಣ ಅವರ ಆರೋಗ್ಯವನ್ನು ವಿಚಾರಿಸಿ, ಸ್ವಲ್ಪ ಕಾಲ ಅವರೊಂದಿಗೆ ಸಮಯ ಕಳೆದಿದ್ದಾರೆ.
ಇನ್ನೂ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಳ್ಳುವವರೆಗೂ ಅಲ್ಲೆಯೇ ನೆಲೆಸಿದ್ದರು. ಪೂರ್ಣವಾಗಿ ಗುಣಮುಖರಾದ ನಂತರ ನಿನ್ನೆ(ಜನವರಿ.26) ತಮ್ಮ ನಿವಾಸಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ್ ಆರೋಗ್ಯವನ್ನು ವಿಚಾರಿಸಿದ್ದಾರೆ.