ರಾಜ್ಯ

ಕುರಿ, ಕೋಳಿ, ವಾಚು, ಉಂಗುರ, ಚಿನ್ನ ಎಷ್ಟಿವೆ ಎಂಬ ಮಾಹಿತಿ ಕೇಳಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು, ಅಪೇಕ್ಷೆಯನ್ನೂ ಪಡಬಹುದು. ಆದರೆ ಸಮೀಕ್ಷೆಯಂತೂ ನಡೆಯುತ್ತದೆ ಎಂದರು.

ಈ ಹಿಂದೆ ನಡೆದಿದ್ದಂತಹ ಸಮೀಕ್ಷೆ ಸರಿಯಿಲ್ಲ ಎಂದು ಹೇಳಿದ್ದಕ್ಕಾಗಿಯೇ ನಮ್ಮ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸುತ್ತಿದೆ. ಈಗಲೂ ವಿರೋಧ ಮಾಡುವುದು ಅರ್ಥಹೀನ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:-ನನ್ನ ಒಬ್ಬನಿಗೆ ಸಮೀಕ್ಷೆ ಮಾಡಲು ಇಷ್ಟೊಂದು ಜನರು ಬೇಕಾ?: ಸಚಿವ ವಿ.ಸೋಮಣ್ಣ ಕ್ಲಾಸ್‌

ಸಮೀಕ್ಷೆಯಲ್ಲಿ ಕೆಲವು ಖಾಸಗಿ ಮಾಹಿತಿಯ ಪ್ರಶ್ನೆಗಳಿವೆ. ಅವುಗಳಿಗೆ ಉತ್ತರ ನೀಡಬೇಕಿಲ್ಲ. ನ್ಯಾಯಾಲಯ ಕೂಡ ಈ ವಿಚಾರವನ್ನು ಸ್ಪಷ್ಟ ಪಡಿಸಿದೆ. ಕುರಿ, ಕೋಳಿ ಬಗ್ಗೆ, ವಾಚು, ಉಂಗುರ, ಫ್ರಿಡ್ಜ್, ಚಿನ್ನ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಕೇಳಬೇಡಿ, ಅವೆಲ್ಲಾ ಖಾಸಗಿ ವಿಚಾರ ಎಂದು ಅಧಿಕಾರಿಗಳಿಗೆ ನಾನು ಕೂಡ ಸೂಚನೆ ನೀಡಿದ್ದೇನೆ. ಅವರು ಯಾವ ರೀತಿ ಪರಿಗಣಿಸುತ್ತಾರೋ ಗೊತ್ತಿಲ್ಲ ಎಂದರು.‌

ಹೊಸದಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಿಗದಿತ ಅವಧಿಯಲ್ಲಿ ಸಮೀಕ್ಷೆ ಮುಗಿಯದಿದ್ದರೆ ಸಮಯ ವಿಸ್ತರಣೆಯ ಬಗ್ಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಆಯೋಗ ಮತ್ತು ಇಲಾಖೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

34 seconds ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

11 mins ago

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

16 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

19 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

28 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago