ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್ ತಂಡದವರಿಗೆ ರೆಬೆಲ್ ಎಂದು ಯಾರೂ ಕೂಡ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದರು.
ಇನ್ನೂ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ ಆಗಬೇಕಿದೆ. ಉಳಿದ ಜಿಲ್ಲಾಧ್ಯಕ್ಷರ ಆಯ್ಕೆ ಎರಡು ಮೂರು ದಿನಗಳಲ್ಲಿ ಆಗಲಿದೆ. ಶೀಘ್ರದಲ್ಲೇ ಹೈಕಮಾಂಡ್‌ಗೆ ಜಿಲ್ಲಾಧ್ಯಕ್ಷರ ಪಟ್ಟಿ ರವಾನೆಯಾಗಲಿದೆ ಎಂದರು.
ನಮ್ಮ ಪಕ್ಷದ ಆಂತರಿಕ ಸಮಸ್ಯೆಗಳು ಕೇಂದ್ರದ ವರಿಷ್ಠರ ಗಮನಕ್ಕೆ ಬಂದಿದೆ. ಯಾರಿಗೆ ನೋಟಿಸ್ ಕೊಡಬೇಕಿತ್ತೋ ಅವರಿಗೆ ಕೊಟ್ಟಾಗಿದೆ. ಅವರು ಅದಕ್ಕೆ ಉತ್ತರ ಕೊಟ್ಟಿದ್ದಾರೆ. ರಾಜ್ಯದ ಹಾಗೂ ಜನರ ಹಿತದೃಷ್ಟಿ ಹಾಗೂ ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ನಾಯಕರು ಈ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು.
ಇನ್ನು ನಾವು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ಸಿದ್ಧರಿದ್ದೇವೆ. ಎಲ್ಲರೂ ಇದಕ್ಕೆ ಕೈಜೋಡಿಸಬೇಕು. ಆದ್ದರಿಂದ ರೆಬೆಲ್ ಎಂದು ಯತ್ನಾಳ್ ತಂಡದವರಿಗೆ ಅನ್ನಬೇಡಿ. ಅವರು ಪಕ್ಷ ಸಂಘಟನೆ ಸಭೆ ಮಾಡುತ್ತಿದ್ದಾರೆ ಎಂದು ನಾಳಿನ ರೆಬೆಲ್ ಟೀಂ ಸಭೆಯ ವಿಚಾರಕ್ಕೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…