Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್:‌ ಪದೇ ಪದೇ ಚರ್ಚೆ ಬೇಡ ಎಂದ ಡಿಕೆಶಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರವನ್ನು ಪದೇ ಪದೇ ಚರ್ಚೆ ಮಾಡೋದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಎಐಸಿಸಿ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ಮತ್ತೆ ಪದೇ ಪದೇ ಮಾತನಾಡುವುದು ಬೇಡ ಎಂದು ಸಚಿವರಿಗೆ ಕಿವಿಮಾತು ಹೇಳಿದರು.

ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಯಾರು ದೂರು ನೀಡಿದ್ದಾರೆ, ಯಾವ ಕಾರಣಕ್ಕೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಇನ್ನು ಬಂದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದ ನಂತರ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

 

Tags:
error: Content is protected !!