ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರವನ್ನು ಪದೇ ಪದೇ ಚರ್ಚೆ ಮಾಡೋದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಎಐಸಿಸಿ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ಮತ್ತೆ ಪದೇ ಪದೇ ಮಾತನಾಡುವುದು ಬೇಡ ಎಂದು ಸಚಿವರಿಗೆ ಕಿವಿಮಾತು ಹೇಳಿದರು.
ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಯಾರು ದೂರು ನೀಡಿದ್ದಾರೆ, ಯಾವ ಕಾರಣಕ್ಕೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಇನ್ನು ಬಂದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದ ನಂತರ ಎಫ್‌ಐಆರ್ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…