ರಾಜ್ಯ

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಬಾರದು: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ.

ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್‌, ಜೆ.ಪಿ.ನಡ್ಡಾ ಹಾಗೂ ನಿರ್ಮಲಾ ಸೀತಾರಾಮನ್‌ ಅವರು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್‌ ಅವರು, ಮುಂದಿನ ತಿಂಗಳು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳಿಗೆ ಹಣ ಬರಬೇಕು. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನಿಲ್ಲಿಸಿದ್ದು, ಅದನ್ನು ಮತ್ತೆ ಕೊಟ್ಟರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇನ್ನೂ ಅನೇಕ ಯೋಜನೆ ಸಂಪೂರ್ಣಗೊಂಡಿಲ್ಲ. ಅವುಗಳಿಗೆ ಬರಬೇಕಾದ ಹಣ ನೀಡಬೇಕು. ಅದನ್ನ ಈ ಬಜೆಟ್‍ನಲ್ಲಾದ್ರೂ ಕೊಡಬೇಕು. ನಾವು ಅತಿ ಹೆಚ್ಚು ಜಿ.ಎಸ್.ಟಿ ಕಟ್ಟುತ್ತೇವೆ. ಅದರಂತೆ ಬಜೆಟ್ ಅನುದಾನ ಹಂಚಿಕೆಯಾಗಬೇಕು, ನಮಗೆ ಬರಬೇಕು. ಬಾಕಿ ಕೊಡುವ ಬಗ್ಗೆ ಉತ್ತಮ ವ್ಯವಸ್ಥೆ ಮಾಡಿದರೆ ಉತ್ತಮ. ಯಾವ ರೀತಿ ಮಾಡುತ್ತಾರೆಯೋ ಕಾದು ನೋಡೋಣ ಎಂದರು.

ಇನ್ನು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಲು ಪೊಲೀಸ್ ಇಲಾಖೆ, ಕಂದಾಯ ಇಲಾಖೆ , ಕಾನೂನು ಇಲಾಖೆ ಜೊತೆಗೂಡಿ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂಬಂಧ ಕೇಂದ್ರ ಸರ್ಕಾರದ ಕೆಲವು ಹಾಗೂ ರಾಜ್ಯ ಸರ್ಕಾರದ ಕೆಲವು ಕಾನೂನುಗಳಿವೆ. ಎಲ್ಲವನ್ನು ಸಂಯೋಜಿಸಿ ನಿಯಂತ್ರಣ ಮಾಡಬೇಕು. ಹೀಗಾಗಿ ಮೈಕ್ರೋ ಫೈನಾನ್ಸ್‌ ಮಾಡುವವರಿಂದ ಸಾಲ ವಸೂಲಿ ಮಾಡುವ ವೇಳೆ ಕೆಲವೆಡೆ ಗಲಾಟೆಗಳಾಗಿವೆ. ಕೆಲವು ಘಟನೆಗಳು ಆಗಿವೆ. ಆತಹತ್ಯೆಯಂತಹ ಪ್ರಕರಣಗಳೂ ನಡೆದಿವೆ. ಹಾಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸ್ಪಷ್ಟವಾದ ನಿರ್ಣಯ ಮಾಡುತ್ತೇವೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago