Mysore
31
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ: ವಿಜಯೇಂದ್ರ ಕಿಡಿ

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ ಪರಂಪರೆಯನ್ನು ಅಗೌರವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ. ಇತ್ತೀಚೆಗೆ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ಯತೀಂದ್ರ ಹೇಳಿಕೊಂಡಿದ್ದರು. ಇದೀಗ ಸಿಎಂ ಆಪ್ತ ಸಚಿವ ಮದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ ನಿರ್ಮಾಣದ ಹಿಂದಿನ ತ್ಯಾಗ-ಪರಿಶ್ರಮದ ಇತಿಹಾಸ ಹಾಗೂ ನಾಲ್ವಡಿಯರುವ ಕೊಡುಗೆಯನ್ನು ಅಪಮಾನಿಸಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಎಚ್.ಸಿ.ಮಹದೇವಪ್ಪ ಅವರೇ ಟಿಪ್ಪು ಸುಲ್ತಾನ್‌ ಕೆಆರ್‌ಎಸ್‌ ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ. ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ. ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.

Tags:
error: Content is protected !!