ಬೆಂಗಳೂರು: ಕೆಆರ್‌ಎಸ್ ಅಣೆಕಟ್ಟು ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜಮನೆತನದ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇತಿಹಾಸವನ್ನು ತಿರುಚಿದ್ದು, ರಾಜವಂಶಸ್ಥರ ಪರಂಪರೆಯನ್ನು ಅಗೌರವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ. ಇತ್ತೀಚೆಗೆ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ಯತೀಂದ್ರ ಹೇಳಿಕೊಂಡಿದ್ದರು. ಇದೀಗ ಸಿಎಂ ಆಪ್ತ ಸಚಿವ ಮದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ ನಿರ್ಮಾಣದ ಹಿಂದಿನ ತ್ಯಾಗ-ಪರಿಶ್ರಮದ ಇತಿಹಾಸ ಹಾಗೂ ನಾಲ್ವಡಿಯರುವ ಕೊಡುಗೆಯನ್ನು ಅಪಮಾನಿಸಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಎಚ್.ಸಿ.ಮಹದೇವಪ್ಪ ಅವರೇ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ. ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ. ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…