ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು.
ಸರ್ಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಇಷ್ಟು ಮಾತ್ರ ನಾನೂ ಹೇಳಬಲ್ಲೇ ಎಂದು ಸಚಿವರು ವಿವರಿಸಿದರು.
ಒಪ್ಪಂದದ ಬಗ್ಗೆ ನಮಗೆ ಯಾರಿಗೂ ಗೊತ್ತಿಲ್ಲ, ಇದು ಹೈಕಮಾಂಡ್ ನಾಯಕರಿಗೆ, ಸಿಎಂ ಮತ್ತು ಡಿಸಿಎಂಗೆ ಬಿಟ್ಟ ವಿಚಾರ ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…