ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲುದಾರಿಕೆ ಇದೆ ಎಂದು ಬಿಜೆಪಿ ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಧರಣಿ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳಿಂದ ಕೇಳಿ ಬಂದಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಈ ದಸರಾದಲ್ಲಿ ಐದು ಸಾವಿರ ಕೋಟಿ ಮೌಲ್ಯದ ಅದ್ಭುತವಾದ ಮುಡಾ ಸೈಟ್ ಸೀಯಿಂಗ್ ಟೂರ್‌ಅನ್ನು ತಪ್ಪಿಸಿಕೊಳ್ಳಬೇಡಿ. ಸೈಟ್ ಸೀಯಿಂಗ್‌ನಲ್ಲಿ ನೀವು ಹಿಂದೆಂದು ನೋಡದ ಭ್ರಷ್ಟಾಚಾರವನ್ನು ಹತ್ತಿರದಿಂದ ನೋಡಬಹುದಾಗಿದೆ. ಸೈಟ್ ಸೀಯಿಂಗ್‌ಗಾಗಿ ಗೋಲ್ಡ್ ಪಾಸ್ ಬೇಕೆ? ದಯವಿಟ್ಟು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ. ಬಳಿಕ ಸಿದ್ದರಾಮಯ್ಯ ವಾಮಮಾರ್ಗವಾಗಿ ಪ್ರವೇಶಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇದು ತಮಾಷೆ ಅಲ್ಲ! ರಾಜ್ಯದಲ್ಲಿ ಈಗಾಗಲೇ ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದೇವೆ ಎಂಬಂತೆ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನು ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಭಾಷಣಗಳ ಸಂದರ್ಭದಲ್ಲಿ ಮುಡಾ ಹಗರಣದ ವಿಚಾರವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…