ರಾಜ್ಯ

ಸಂಘ ಸಂಸ್ಥೆಗಳ ಮನೋರಂಜನಾ ಚಟುವಟಿಕೆಗೆ ಪೊಲೀಸ್‌ ಅನುಮತಿ ಬೇಡ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ರಿಕ್ರಿಯೇಷನ್ ಕ್ಲಬ್‌ಗಳು ಅಥವಾ ಸಂಘ ಸಂಸ್ಥೆಗಳು ತಮ್ಮ ಮನೋರಂಜನಾ ಚಟುವಟಿಕೆ ನಡೆಸಲು ಪೊಲೀಸ್ ಅನುಮತಿ ಪಡೆಯಬೇಕಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೈಸೂರಿನ ಸೀರಗಳ್ಳಿ ಲಕ್ಷ್ಮಿದೇವಿ ರಿಕ್ರಿಯೇಷನ್ ಕ್ಲಬ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ.ಎಸ್. ಹೇಮಲೇಖಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದ್ದು, ಈ ಬಗ್ಗೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನವನ್ನೂ ನೀಡಿದೆ.

ಅರ್ಜಿದಾರರು ತಮ್ಮ ಮನೋರಂಜಾ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರ ಅನುಮತಿ ಕೋರಿದ್ದರು. ಲಿಖಿತ ಅನುಮತಿ ಅರ್ಜಿಯನ್ನು ಸ್ಥಳೀಯ ಪೊಲೀಸರು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ರಿಕ್ರಿಯೇಷನ್ ಕ್ಲಬ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ರಿಕ್ರಿಯೇಷನ್ ಕ್ಲಬ್, ಸಂಘ ಸಂಸ್ಥೆಗಳು ಮನರಂಜನಾ ಚಟುವಟಿಕೆ ನಡೆಸಲು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪೊಲೀಸರಿಂದ ಪರವಾನಗಿ ಪಡೆಯಬೇಕು ಎಂದು ಹೇಳುವುದು ತರ್ಕಹೀನ ಮತ್ತು ಇಲಾಖೆಯ ಸ್ವಚ್ಛಾಚಾರದ ಕ್ರಮ ಎಂದು ನ್ಯಾಯಪೀಠ ಬಣ್ಣಿಸಿದೆ.

ಪೊಲೀಸರು ಏನು ಮಾಡಬಾರದು:

ಕ್ಲಬ್‌ಗಳು ತನ್ನ ಸಂಘದ ಸದಸ್ಯರಿಗೆ ಸೀಮಿತವಾಗಿ ಮಾತ್ರ ಮನರಂಜನಾ ಚಟುವಟಿಕೆ ನಡೆಸುವ ಸಂಸ್ಥೆಯಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಶುಲ್ಕ ಪಡೆದೋ ಅಥವಾ ಉಚಿತವಾಗಿಯೋ ಸಾರ್ವಜನಿಕರು ಪ್ರವೇಶ ಪಡೆಯುವಂತಿಲ್ಲ.

ಬೈಲಾ ಪ್ರಕಾರ ಕಾರ್ಯಕ್ರಮಕ್ಕೆ ಪ್ರವೇಶ ನಿರ್ಬಂಧಿತವಾಗಿದ್ದು, ಕ್ಲಬ್ ಸದಸ್ಯರಿಗೆ ಮಾತ್ರ ಪ್ರವೇಶವಿರಲಿದೆ. ಪ್ರಸಕ್ತ ಕಾನೂನಿನ ಅನ್ವಯ ಯಾವುದೇ ಕ್ಲಬ್ ಅಥವಾ ಸಂಘ-ಸಂಸ್ಥೆಯು ಮನರಂಜನಾ ಚಟುವಟಿಕೆ ನಡೆಸಲು ಯಾವುದೇ ಅನುಮತಿ ಅಥವಾ ಲೈಸನ್ಸ್ ಪಡೆಯಬೇಕಾಗಿಲ್ಲ.

ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಲೈಸನ್ಸ್ ಪಡೆಯುವಂತೆ ಸೂಚಿಸುವುದು ಸ್ವಚ್ಛಾಚಾರದ, ತರ್ಕಹೀನ ಕ್ರಮ. ಇಂತಹ ಕಾರ್ಯಕ್ರಮಗಳಿಗೆ ಪೊಲೀಸರು ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ

ಪೊಲೀಸ್ ಏನು ಮಾಡಬಹುದು:

‘ಕ್ಲಬ್’ ಎಂದು ರಿಜಿಸ್ಟರ್ ಆಗಿರುವ ಎಲ್ಲವೂ ಕಾನೂನುಬಾಹಿರವಾಗಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿವೆ ಎನ್ನುವಂತೆ ಸರ್ಕಾರದ ಪ್ರಾಧಿಕಾರಗಳು ಭಾವಿಸಿಕೊಂಡು ಅದರ ವಿರುದ್ಧ ನಡೆದುಕೊಳ್ಳಬಾರದು. ಅಗತ್ಯಬಿದ್ದರೆ, ಪೊಲೀಸರು ಕಾಯ್ದೆಯ ಷರತ್ತುಗಳ ಜಾರಿಗೆ ‘ನಿಗಾ’ ಯಾ ರೇಡ್ ನಂತಹ ಕ್ರಮಗಳನ್ನು ಬಳಸಬಹುದು.

ಪೊಲೀಸರು ಪರಿಶೀಲನೆ ನಡೆಸಿ ಅಲ್ಲಿ ಏನು ಕಾರ್ಯಕ್ರಮ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆಯಬಹುದು. ಈ ಮೂಲಕ ಕ್ಲಬ್ ಸ್ಥಳವನ್ನು ಅಕ್ರಮ ಚಟುವಟಿಕೆಗಳಿಗೆ ನಡೆಸದಂತೆ ಪೊಲೀಸರು ತಡೆಯಬಹುದು ಎಂದು ನ್ಯಾಯಪೀಠ ಹೇಳಿದೆ.

ಕರ್ನಾಟಕ ಪೊಲೀಸ್ ಆಕ್ಟ್ ಕಲಂ 2 (14) ಮತ್ತು (15)ರ ಅಡಿ ಸಾರ್ವಜನಿಕ ಅಮ್ಯೂಸ್ಕೆಂಟ್ ಅಥವಾ ಸಾರ್ವಜನಿಕ ಮನರಂಜನೆಯಾದರೆ ಮಾತ್ರ ಲೈಸನ್ಸ್ ಪಡೆಯಬೇಕು ಎಂದು ಹಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಪೀಠ ತಿಳಿಸಿದೆ.

ತಮ್ಮ ಕ್ಲಬ್‌ನ ಸದಸ್ಯರು ರಮ್ಮಿ (ಕಾರ್ಡ್ ಗೇಮ್ಸ್), ಚೆಸ್, ಕೇರಂ, ಬಿಲಿಯರ್ಡ್ಸ್, ಸ್ಪೂಕರ್ ಮುಂತಾದ ಕೌಶಲ್ಯದ ಒಳಾಂಗಣ ಆಟಗಳು ಅಥವಾ ಹೊರಾಂಗಣದ ಆಟಗಳನ್ನು ಆಡಲು ಸಾರ್ವಜನಿಕ ಮನರಂಜನಾ ಸ್ಥಳಗಳ ಪರವಾನಗಿ ಮತ್ತು ನಿಯಂತ್ರಣ ನಿಬಂಧನೆಯ ಅಡಿ ಪರವಾನಗಿ ಅಥವಾ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago