ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರಧಾನಿ ಮೋದಿ ‘ಸ್ಪಷ್ಟ ಮತ್ತು ಪ್ರಾಮಾಣಿಕ‘ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಈ ಒಪ್ಪಂದವು ಅನಿಯಂತ್ರಿತ ಜಿಎಂ ಆಮದಿಗೆ ಅನುಮತಿ ನೀಡುತ್ತದೆ, ಸುರಕ್ಷತಾ ಕ್ರಮಗಳನ್ನು ದುರ್ಬಲಗೊಳಿಸುತ್ತದೆ. ರಕ್ಷಣೆಯಿಲ್ಲದೆ ಕ್ರಮೇಣ ಹೆಚ್ಚಿನ ಬೆಳೆಗಳನ್ನು ತೆರೆದರೆ, ಅದು ಕರ್ನಾಟಕ ಸೇರಿದಂತೆ ದೇಶಾದ್ಯಂತ ರೈತರಿಗೆ ನೇರವಾಗಿ ಹಾನಿ ಮಾಡುತ್ತದೆ’ ಎಂದು ಹೇಳಿದ್ದಾರೆ.
‘ಯುಎಸ್ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ ಬಗೆದಿರುವುದನ್ನು ನಾವು ನೋಡುತ್ತಿದ್ದೇವೆ’ ಎಂದು ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ‘ವ್ಯಾಪಾರೇತರ ಅಡೆತಡೆಗಳು’ ಎಂದರೆ ಏನು ಎಂದು ತಿಳಿಯಲು ರಾಹುಲ್ ಪ್ರಯತ್ನಿಸಿದ್ದಾರೆ, ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿಸಿದರೆ ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ದೇಶಾದ್ಯಂತ ಸೋಯಾ ಬೆಳೆವ ರೈತರ ಪರಿಸ್ಥಿತಿ ಏನಾಗಬಹುದು ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತ ಪಡಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಈ ವ್ಯಾಪಾರ ಒಪ್ಪಂದ ಸಂಬಂಧ ರೈತರು ಸ್ಪಷ್ಟತೆ ಪಡೆಯಲು ಅರ್ಹರಾಗಿದ್ದಾರೆ. ಇದು ಇಂದಿನ ವಿಷಯವಲ್ಲ. ಭಾರತದ ಕೃಷಿ ವ್ಯವಸ್ಥೆಯ ಮೇಲೆ ನಾವು ಇನ್ನೊಂದು ದೇಶಕ್ಕೆ ದೀರ್ಘಾವಧಿಯ ಹಿಡಿತವನ್ನು ನೀಡುತ್ತಿದ್ದೇವೆಯೇ ಎಂಬುದಕ್ಕೆ ಸಂಬಂಧಿಸಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಭಾರತದ ಹಿತಾಸಕ್ತಿಗಳನ್ನು ಮಾರಾಟ ಮಾಡಬೇಡಿ. ರಾಜಕೀಯ ಬಲವಂತಗಳಿಗಾಗಿ ನಮ್ಮ ರೈತರನ್ನು ಮಾರಾಟ ಮಾಡಬೇಡಿ. ವಿದೇಶಿ ಒತ್ತಡಕ್ಕೆ ಶರಣಾಗಬೇಡಿ. ನಮ್ಮ ರೈತರು ಚೌಕಾಸಿ ಮಾಡುವವರಲ್ಲ. ಅವರು ಈ ರಾಷ್ಟ್ರದ ಜೀವನಾಡಿ ಎಂದು ಒತ್ತಾಯಿಸಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…