ಬೆಂಗಳೂರು: ದೇಶಾದ್ಯಂತ ವ್ಯಾಪಕವಾಗಿ ಹರಡಿರುವ ಎಚ್3 ಎನ್2 ವೈರಸ್ ರಾಜ್ಯದಲ್ಲಿ ಇದುವರೆಗೂ ಕಂಡು ಬಂದಿಲ್ಲದ ಕಾರಣ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವೈರಸ್ ಬಗ್ಗೆ ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳು ಹಾಗೂ ಚಿಕಿತ್ಸೆ ಕುರಿತಂತೆ ತಜ್ಞರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.
ವೈರಸ್ನಿಂದ ದೀರ್ಘಕಾಲದ ಕೆಮ್ಮು ಇರಲಿದೆ ಎಂಬ ಮಾಹಿತಿ ಇದೆ. ಆ ರೀತಿಯ ಯಾವ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಪ್ರಕಾರ ವೈರಸ್ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾಳೆ ನಡೆಯುವ ಸಭೆಯಲ್ಲಿ ತಜ್ಞರು ನೀಡುವ ಸಲಹೆ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ಈ ವೈರಸ್ ಪತ್ತೆಯಾದರೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಹೇಗಿರಬೇಕು ಎಂಬ ಬಗ್ಗೆ ನಾಳಿನ ಸಭೆಯ ನಂತರ ಪ್ರಕಟಿಸಲಾಗುವುದು. ಈಗಾಗಲೇ ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಇಲಾಖೆಯ ಪ್ರಧಾನಕಾರ್ಯದರ್ಶಿಗಳು ವೈರಸ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಂದು ದೇಶದಲ್ಲಿ ಸೈಕ್ಲಥಾನ್ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲೂ ವಿಧಾನಸೌಧದ ಮುಂಭಾಗದಿಂದ ಮಾಗಡಿ ರಸ್ತೆಯ ಆರೋಗ್ಯ ಸೌಧದವರೆಗೆ ಸೈಕಲ್ ಜಾಥ ಹಮ್ಮಿಕೊಳ್ಳಲಾಗಿದೆ. ಈ ಜಾಥದಲ್ಲಿ ವಿದ್ಯಾರ್ಥಿನಿಯರು ಹಾಗೂ ವೃತ್ತಿಪರ ಸೈಕ್ಲಿಸ್ಟ್ಗಳು ಭಾಗಿಯಾಗಿದ್ದಾರೆ. ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಉತ್ತಮ ಆರೋಗ್ಯವಂಥರಾದಾಗ ಮಾತ್ರ ಆರ್ಥಿಕ ಚೈತನ್ಯ ಉಂಟಾಗಿ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಉತ್ತಮ ಆರೋಗ್ಯಕ್ಕಾಗಿ ನಿಯಮಿತ ದೈಹಿಕ ಚಟುವಟಿಕೆಗಳ ಜತೆಗೆ ಪೌಷ್ಠಿಕಾಂಶ ಸೇವನೆ ಮಾಡಬೇಕು. ವರ್ಷಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಂಬಾಕು, ಮದ್ಯಪಾನದಿಂದ ದೂರವಿರಬೇಕು. ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇದೆ. ಹೀಗಾಗಿ ಅವರ ಆರೋಗ್ಯದ ಬಗ್ಗೆ ವಿಶೇಷ ಒತ್ತು ಕೊಡಬೇಕು ಎಂದು ಅವರು ಹೇಳಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.