ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೀನಾ ದೇಶದಲ್ಲಿ ಎಚ್‌ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಈ ವೈರಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಆದ್ದರಿಂದ ಹೆಚ್ಚಿನ ರೀತಿಯಲ್ಲಿ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಆರೋಗ್ಯ ಸಚಿವರು ಈ ಬಗ್ಗೆ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಇನ್ನು ಸೋಂಕು ತಡೆಯ ಕ್ರಮವಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಸ್ಕ್ರೀನಿಂಗ್ ಪುನಃ ಪ್ರಾರಂಭಿಸುವ ಬಗ್ಗೆ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಈ ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…