ರಾಜ್ಯ

HMPV ವೈರಸ್‌ ಬಗ್ಗೆ ಆತಂಕ ಬೇಡ ಮುಂಜಾಗ್ರತೆ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋ಼ಷ್ಠಿ ನಡೆಸಿ ಮಾತನಾಡಿದ ಅವರು, ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಆಗತ್ಯವಿಲ್ಲ. ಭಾರತದಲ್ಲಿ ಇದು ಹೊಸದೇನಲ್ಲ. ಬಹಳಷ್ಟು ವರ್ಷಗಳಿಂದ ಎಚ್‌ಎಂಪಿವಿ ವೈರಸ್‌ ವಿಶ್ವದಾದ್ಯಂತ ಇದೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.

ದೇಶದಲ್ಲಿ ಎಚ್‌ಎಂಪಿವಿ ವೈರಸ್‌ ರೀತಿ ನೂರಾರು ರೀತಿಯ ವೈರಸ್‌ಗಳಿವೆ. ಯಾರು ಇದರ ಬಗ್ಗೆ ಭಯ ಪಡುವ ಆಗತ್ಯವಿಲ್ಲ. ಕಳೆದ 2001ರಲ್ಲಿ ಮೊದಲ ಬಾರಿಗೆ ಈ ವೈರಸನ್ನು ಪತ್ತೆ ಹಚ್ಚಲಾಗಿದೆ. ಈ ವೈರಸ್‌ನಿಂದ ಜನರು ಆತಂಕದಲ್ಲಿದ್ದಾರೆ. ಚಳಿಗಾಲದಲ್ಲಿ ಸಹಜವಾಗಿ ಕೆಮ್ಮು, ಕಫ ಇದ್ದೇ ಇರುತ್ತದೆ. ಆದರೆ ಇಂತಹ ಲಕ್ಷಣಗಳು ಎಚ್‌ಎಂಪಿವಿ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ನೆರೆಯ ದೇಶ ಚೀನಾದಲ್ಲಿನ ಈ ವೈರಸ್‌ ಹರಡುವಿಕೆ ಕುರಿತಾದ ಮಾಹಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕು. ಈಗಾಗಲೇ ದೇಶದಲ್ಲಿ ಗುಜರಾತ್‌, ಪುದುಚೇರಿಯಲ್ಲಿ ಎಚ್‌ಎಂಪಿವಿ ವೈರಸ್‌ ಪ್ರಕರಣ ದಾಖಲಾಗಿವೆ. ಇದರಿಂದ ಮಕ್ಕಳು ಭಯ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಲಾಕ್‌ಡೌನ್‌ ಹಾಗೂ ಮಾಸ್ಕ್‌ ಸೇರಿದಂತೆ ಯಾವುದು ಇಲ್ಲ. ಯಾರೂ ಕೂಡ ಭಯಪಡಬೇಡಿ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago