ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಮೇಲೆ ಹದಿನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.
ಯೂಟ್ಯೂಬರ್ ಸಮೀರ್ ಎಂಬಾತ ಮಾಡಿದ್ದ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಈ ಬೆನ್ನೆಲ್ಲೇ ಎಚ್ಚೆತ್ತ ರಾಜ್ಯ ಪೊಲೀಸ್ ಇಲಾಖೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ನಿಗಾ ವಹಿಸುವಂತೆ ಸೂಚಿಸಿದೆ.
ಈ ಕುರಿತು ಬುಧವಾರ ರಾಜ್ಯಾ ಪೊಲೀಸ್ ಮಹಾನಿರ್ದೇಶಕರು ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಕಮಿಷನರ್ ಹಾಗೂ ಎಸ್ಪಿ ಗಳಿಗೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚರುಕುಗೊಳಿಸುವಂತೆ ಸೂಚಿಸಿದ್ದಾರೆ.
ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ಘಟಕಾಧಿಕಾರಿಗಳು ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ-ವಿರೋಧ ಅನಿಸಿಕೆಗಳು ಉದ್ಭವಿಸಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ.
ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳ ಕುರಿತು ನಿಗಾ ವಹಿಸಬೇಕು. ಬಳಿಕ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ.
ಏನಿದು ಸಂಚಲನದ ವೀಡಿಯೊ…
Dhootha : Sameer MD ಎಂಬ ಯೂಟ್ಯೂಬ್ ಚಾನಲ್‌ನಲ್ಲಿ ಕಳೆದ ಏಳು ದಿನದ ಹಿಂದೆ ಸಮೀರ್, ಕುಮಾರಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ವೀಡಿಯೊ ಮಾಡಿ ಬಿಟ್ಟಿದ್ದು, ಈ ವೀಡಿಯೊ 39 ನಿಮಿಷ 8 ಸೆಕೆಂಡ್ ಇದೆ.
ಮೊದಲ ನಾಲ್ಕು ದಿನ ನಿಧಾನಕ್ಕೆ ವೀಕ್ಷಣೆ ಪಡೆದುಕೊಂಡಿದ್ದ, ಈ ವೀಡಿಯೊ ಕಳೆದ ಮೂರು ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲೇ ಸಂಚಲನ ಸೃಷ್ಟಿಸಿದೆ. ಅಕ್ಷರಶಃ ಭಾರಿ ವೈರಲ್ ಆಗಿದ್ದು, ಇದೀಗ ಗುರುವಾರ ಮಧ್ಯಾಹ್ನದ ವೇಳೆ ಬರೋಬ್ಬರಿ 14,194,233 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇದಕ್ಕೆ 47ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿದ್ದು, 1 ಮಿಲಿಯನ್ ಜನರು ಲೈಕ್ ಬಟನ್ ಒತ್ತಿದ್ದಾರೆ.
ಅಲ್ಲದೇ, ಈ ವೀಡಿಯೊ ಬೇರೆ ಬೇರೆ ಯೂಟ್ಯೂಬ್ ಚಾನಲ್‌ಗಳಲ್ಲಿಯೂ ಮರು ಪೋಸ್ಟ್ ಆಗಿ ವೀಕ್ಷಣೆ ಪಡೆಯುತ್ತಿದೆ. ಅದೇ ರೀತಿ, ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಎಕ್ಸ್ ಸೇರಿದಂತೆ ಇತರೆಡೆ ಈ ವೀಡಿಯೊ ಬಿಸಿ ಬಿಸಿ ಚರ್ಚೆ ಹುಟ್ಟುಹಾಕಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…