ಬೆಳಗಾವಿ : ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪಾಲಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದ್ದು, ಮನೆಗೆ ಮೊಮ್ಮಗಳು ‘ಮಹಾಲಕ್ಷ್ಮೀ ಯ ಆಗಮನವಾಗಿದೆ.
ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಪಕ್ಷ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ಒದಗಿ ಬಂದಿದೆ. ಪ್ರಮಾಣವಚನ ಸ್ವೀಕಾರ ಖುಷಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.
ಸಚಿವ ಸ್ಥಾನ ದಕ್ಕಿದ ದಿನವೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೇ.26 ರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಜನನವಾಗಿದೆ.
ಪುತ್ರ ಮೃಣಾಲ್, ಸೊಸೆ ಹಿತಾಗೆ ಹೆಣ್ಣುಮಗು ಜನಿಸಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಖುಷ್ ಆಗಿದ್ದು, ಸಚಿವಗಿರಿ ಜೊತೆಗೆ ಮನೆಗೆ ಮಹಾಲಕ್ಷ್ಮೀ ಬಂದ ಖುಷಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಳಿಕ ಹೆಬ್ಬಾಳ್ಕರ್ ಕುಟುಂಬ ಬೆಂಗಳೂರಿಂದ ನೇರವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ.