ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮಗೆ ಬೇಕಾದ ಕಡೆ ಇವಿಎಂ ಮೂಲಕ ಗೆಲ್ಲುತ್ತಾರೆ. ಅವರು ಈಗ ಗೆದ್ದಿರೋದು ಕೂಡ ಇವಿಎಂ ಮೂಲಕವೇ. ಬೇರೆ ಯಾವುದರಿಂದಲೂ ಅವರು ಗೆಲ್ಲಲು ಸಾಧ್ಯವೇ ಇಲ್ಲ ಎಂದು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲೂ ಇದೇ ರೀತಿ ಆಗಿದೆ. ಅದರ ಬಗ್ಗೆ ರಾಹುಲ್ ಗಾಂಧಿಯವರು ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು.