ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪತಿ ಮತ್ತು ಆತನ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ. ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೊಳೆಹೊನ್ನೂರು ಪೊಲೀಸರು ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲು
ಘಟನೆ ವಿವರ :ಭದ್ರಾವತಿಯ ಡಿ.ಬಿ. ಹಳ್ಳಿಯ ಲತಾ ಮತ್ತು ಶಿಕಾರಿಪುರ ತಾಲೂಕಿನ ದಿಂಡಿನಹಳ್ಳಿ ಗ್ರಾಮದ ಗುರುರಾಜ್ ಮದುವೆ 2025ರ ಏಪ್ರಿಲ್ 14ರಂದು ನೆರವೇರಿತ್ತು. ಭದ್ರಾ ಡ್ಯಾಂನ ಕೆಪಿಸಿಎಲ್ನಲ್ಲಿ ಎಇಇ ಆಗಿ ಗುರುರಾಜ್ ಸೇವೆ ಸಲ್ಲಿಸುತ್ತಿದ್ದರು. ಸರಕಾರಿ ಅಧಿಕಾರಿ ಎನ್ನುವ ಕಾರಣಕ್ಕೆ ಭರ್ಜರಿ ವರದಕ್ಷಿಣೆ ಕೊಟ್ಟು ಲತಾ ಪೋಷಕರು ಮಗಳ ಮದುವೆ ಮಾಡಿದ್ದರು. 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಸೇರಿ ಸಿಮಾರು 60 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದರು. ಇಷ್ಟೆಲ್ಲಾ ವರದಕ್ಷಣೆ, ವರೋಪಚಾರ ಪಡೆದ್ರೂ ಅವರ ದಾಹ ಕಡಿಮೆ ಆಗಿರಲಿಲ್ಲ. ಮದುವೆ ನಡೆದ ಒಂದೇ ತಿಂಗಳಿಗೆ ಪತಿ ಮನೆಯವರ ಬಣ್ಣ ಲತಾ ಎದುರು ಬಯಲಾಗಿದೆ. ವರದಕ್ಷಿಣೆಗಾಗಿ ಪತಿ ಗುರುರಾಜ್ ಜೊತೆ ಆತನ ಮನೆಯವರೂ ಪೀಡಿಸಿದ್ದಾರೆ.
ಒಂದೇ ಒಂದು ದಿನವೂ ಲತಾರನ್ನು ಚೆನ್ನಾಗಿ ನೋಡಿಕೊಳ್ಳದ ಗುರುರಾಜ್, ಪದೇ ಪದೇ ಕಿರುಕುಳ ನೀಡುತ್ತಿದ್ದ. ಪತ್ನಿ ಮುಂದೆಯೇ ಅಕ್ಕನ ಮಗಳ ಜೊತೆ ಸಲಿಗೆಯಿಂದ ಇರುತ್ತಿದ್ದ. ಅಲ್ಲದೆ ಇನ್ನೊಂದು ಯುವತಿಯ ಜೊತೆಗೂ ಚಾಟಿಂಗ್ ನಡೆಸುತ್ತಿದ್ದ. ಈ ಎಲ್ಲ ವಿಷಯವನ್ನೂ ಲತಾ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಆಷಾಡಕ್ಕೆಂದು ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ತವರು ಮನೆಗೆ ಲತಾ ಬಂದಿದ್ದರು. ಆದ್ರೆ ಆಷಾಡ ಮುಗಿದ್ರೂ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ಗುರುರಾಜ್ ಬಂದಿರಲೇ ಇಲ್ಲ. ಈ ಎಲ್ಲ ಘಟನೆಗಳಿಂದಾಗಿ ಲತಾ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ತನ್ನ ಸಾವಿಗೆ ಪತಿಯ ಅಕ್ಕಂದಿರಾದ ನಾಗರತ್ನಾ, ರಾಜೇಶ್ವರಿ, ಅತ್ತೆ ಶಾರದಮ್ಮ, ಪತಿಯ ಅಕ್ಕನ ಗಂಡ ಕೃಷ್ಣಪ್ಪ ಹಾಗೂ ಪತಿ ಗುರುರಾಜ್ ಕಾರಣ ಎಂದು ಲತಾ ಡೆತ್ನೋಟ್ನಲ್ಲಿ ಆರೋಪಿಸಿದ್ದಾರೆ.
ನವೆಂಬರ್ 23ರಂದು ಭದ್ರಾವತಿಯ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಇರುವ ಭದ್ರಾ ಬಲದಂಡೆ ನಾಲೆಗೆ ಹಾರಿದ್ದಾರೆ. ಸಾಯುವ ಮೊದಲು ನಾಲೆಯ ಬಳಿ ಇರುವ ದೇಗುಲ ಬಳಿ ಬಳೆ ಹಾಗೂ ಮೊಬೈಲ್ ಇಟ್ಟು ಹೊಗಿದ್ದಾರೆ. ಮಗಳ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದು, ನಾಲೆ ಬಳಿ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…