Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್‌ 26ರ ಸಂವಿಧಾನ ದಿನಾಚರಣೆ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಜೊತೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸುವಂತೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನಿಸಿ ಅಂಗೀಕರಿಸಿದೆ.

Image

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, “ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಸೇರಿದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಭಾವಚಿತ್ರ ಇರಿಸುವುದನ್ನು ಕಡ್ಡಾಯಗೊಳಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

Tags: