ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನ ದಿನಾಚರಣೆ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಜೊತೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಿಸುವಂತೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನಿಸಿ ಅಂಗೀಕರಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, “ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಸೇರಿದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವುದನ್ನು ಕಡ್ಡಾಯಗೊಳಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…