ರಾಜ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು: ಸಂಸದ ಮಂಜುನಾಥ್‌

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣವೂ ಒಳ್ಳೆಯ ರಾಜಕಾರಣದ ಲಕ್ಷಣವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದು ಸಂಸದ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಶಾಸಕ ಮುನಿರತ್ನ ಕೆ.ಸಿ.ಜನರಲ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮುನಿರತ್ನ ಆರೋಗ್ಯವನ್ನು ವಿಚಾರಿಸಿದ ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಮುನಿರತ್ನ ಅವರನ್ನು ಪರೀಕ್ಷಿಸಿದ್ದೇನೆ. ಸಾಮಾನ್ಯವಾಗಿ ತಲೆಗೆ ಪೆಟ್ಟು ಬಿದ್ದಾಗ ವಾಂತಿ ಮತ್ತು ತಲೆ ಸುತ್ತು ಬರುವುದು ಸಹಜ. ಹೀಗಾಗಿ ಫಿಜಿ಼ಶಿಯನ್‌ಗೆ ಸಿಟಿ ಸ್ಕ್ಯಾನ್‌ ಮಾಡಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ನಮ್ಮ ದೇಶಕ್ಕೆ ಸಂವಿಧಾನ ಬಂದು 75 ವರ್ಷಗಳು ಕಳೆದಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ಗೌರವ ನೀಡಬೇಕು. ಚುನಾವಣೆಯಲ್ಲಿ ಸ್ಪರ್ಧಾತ್ಮಕವಾಗಿದ್ದು, ಸೋಲು-ಗೆಲುವು ಸಹಜ. ಯಾರೇ ಆಗಲಿ ಸಂವಿಧಾನಕ್ಕೆ ಬೆಲೆ ಮತ್ತು ಗೌರವ ನೀಡುವಂತೆ ನಡೆದುಕೊಳ್ಳಬೇಕು. ಹೀಗಿದ್ದರೂ ಇಂತಹ ಘಟನೆಗಳು ನಡೆದಿದೆ ಎಂದರೆ ಇದು ಬಹಳ ಖಂಡನೀಯವಾಗಿದೆ. ಎಲ್ಲೋ ಒಂದು ಕಡೆ ಸರ್ಕಾರದ ವ್ಯವಸ್ಥೆ ಹಾದಿ ತಪ್ಪುತ್ತಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

8 mins ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

51 mins ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

2 hours ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

3 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

3 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

4 hours ago