Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಡಾ.ಎಂ.ಎ ಸಲೀಂ ನೇಮಕ

saleem

ಬೆಂಗಳೂರು : ರಾಜ್ಯದ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿತ್ತು. ಅಲೋಕ್‌ ಮೋಹನ್‌ ಅವರಿಂದ ತೆರವಾದ ಸ್ಥಾನಕ್ಕೆ ಡಾ.ಎಂ.ಎ.ಸಲೀಂ ಅವರನ್ನು ಪ್ರಭಾರವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿತ್ತು. ಇದೀಗ ಅಧಿಸೂಚನೆ ಹೊರಡಿಸಿರುವ ಸರ್ಕಾರ ಡಿಜಿ-ಐಜಿಪಿಯಾಗಿ ನೇಮಿಸಿದೆ.

1966ರ ಜೂನ್‌ 22ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಸಲೀಂ ಅವರು, 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್‌ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದರು. 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್‌ ಮ್ಯಾನೇಜ್ಮೆಂಟ್‌ ವಿಷಯದಲ್ಲಿ ಡಾಕ್ಟರೇಟ್‌ ಪದವಿ ಪಡೆದುಕೊಂಡಿದ್ದಾರೆ.

Tags:
error: Content is protected !!