saleem
ಬೆಂಗಳೂರು : ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಕನ್ನಡಿಗ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿತ್ತು. ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ ಡಾ.ಎಂ.ಎ.ಸಲೀಂ ಅವರನ್ನು ಪ್ರಭಾರವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿತ್ತು. ಇದೀಗ ಅಧಿಸೂಚನೆ ಹೊರಡಿಸಿರುವ ಸರ್ಕಾರ ಡಿಜಿ-ಐಜಿಪಿಯಾಗಿ ನೇಮಿಸಿದೆ.
1966ರ ಜೂನ್ 22ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಸಲೀಂ ಅವರು, 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದರು. 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…