ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ ಕೊಟ್ಟಿದ್ದಾರೆ. ಆದರೆ ಕಳೆದ ಎರಡೂವರೆ ವರ್ಷದಿಂದ ಸರ್ಕಾರು ಮಾಡಿದ್ದಾದರೂ ಏನು? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಬರೀ ಸಿಎಂ ಕುರ್ಚಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್‌ನವರಿಗೆ ರಾಜ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಅಂತಾನೂ ಇಲ್ಲ. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.





