ಬೆಂಗಳೂರು : ಭಾರತ ದೇಶದ 16 ನೇ ರಾಷ್ಟ್ರಪತಿ ಚುನಾವನಾ ಸ್ಥರ್ಧಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಅವರು ನಗರದ ಶಾಂಗ್ರೀಲಾ ಹೋಟೆಲ್ಗೆ ತೆರಳಿದರು. ಈ ವೇಳೆ ಆದಿವಾಸಿ ಕಲಾತಂಡಗಳು ಅವರನ್ನು ಬರಮಾಡಿಕೊಂಡರು. ಶಾಂಗ್ರೀಲಾ ಹೋಟೆಲ್ನಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿದರು.
ದ್ರೌಪದಿ ಮುರ್ಮು ಜೂನ್ 24 ರಂದು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ.