ಚಿಕ್ಕಮಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ.
ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸದ ಉಪವಲಯ ಅರಣ್ಯಾಧಿಕಾರಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು . ಇದರ ಬೆನ್ನಲ್ಲೇ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಡಿಆರ್ ಎಫ್ಒ ದರ್ಶನ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಅಮಾನತುಗೊಳಿಸಿ ಲಿಖಿತ ಆದೇಶ ಹೊರಡಿಸಲಾಗಿದೆ.