ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದು ಕೋರಿ ಸಂಸದ ಡಾ.ಕೆ.ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕಳೆದ ಐದು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಎಂಬಾತ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.
ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬಾಬು ಉಲ್ಲೇಖಿಸಿದ್ದನು.
ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಎಫ್‌ಐಆರ್ ರದ್ದು ಕೋರಿ ಸುಧಾಕರ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.





