Mysore
21
overcast clouds

Social Media

ಭಾನುವಾರ, 13 ಜುಲೈ 2025
Light
Dark

ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ

ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ ರೈತರು ಬೆಳೆದಿದ್ದರೂ ನೀರಿನ ಕೊರತೆಯಿಂದ ಬೆಳೆ ಒಣಗಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದರಿಂದ ಹಲವು ರೈತ ಸಂಘಟನೆಗಳು ಬೆಳೆ ಪರಿಹಾರ ಘೋಷಣೆ ಮಾಡಿಬೇಕೆಂದು ಆಗ್ರಹಿಸಿದ್ದವು. ಅದರಂತೆ ಇದೀಗ ರಾಜ್ಯ ಸರ್ಕಾರ ಬೆಳೆ ಪರಿಹಾರಕ್ಕೆ ಅನುದಾನ ರಿಲೀಸ್ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!