ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ಬರಗಾಲದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ. ಪರಿಹಾರದ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬರ ಪರಿಹಾರದ ಹಣಕ್ಕಾಗಿ ರೈತ ನೊಂದಣಿ ಹಾಗೂ ಫಲಾನುಭವಿ ಮಾಹಿತಿ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಹಾಗಾಗಿ ಅದರಲ್ಲಿ ನೊಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್ ಆಧರಿತ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು ಕೇಂದ್ರ ಸರ್ಕಾರ ಬರಪರಿಹಾರದ ನೆರವನ್ನು ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಕೇಂದ್ರದ ಬರ ಅಧ್ಯಯನದ ತಂಡ ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನ ಮಾಡಿದೆ. ಅಕ್ಟೋಬರ್ 13 ರಂದು ಆ ವರದಿಯನ್ನು ಸಲ್ಲಿಸಲಾಗಿದೆ. ಆದರೇ ಇನ್ನೂ ಕೂಡ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.
ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಕೂಡ ಪರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಎರಡೆರಡುಬಾರಿ ಪತ್ರ ಬರೆದಿದ್ದೇವೆ. ಆದರೂ ಕೂಡ ಏನು ಪ್ರಯೋಜನವಾಗಿಲ್ಲ. ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…