G Parameshwara
ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.
ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್‌ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.
ಧರ್ಮಸ್ಥಳ ಭಾಗದಲ್ಲಿ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…