ರಾಜ್ಯ

ಮೈಸೂರಿನಲ್ಲಿ ಡ್ರಗ್ಸ್ ಜಾಲ : ಪೊಲೀಸರ ಲೋಪ ಗಂಭೀರ ವಿಷಯ : ಗೃಹ ಸಚಿವ

ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.

ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್‌ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.

ಧರ್ಮಸ್ಥಳ ಭಾಗದಲ್ಲಿ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

17 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

17 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

18 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

19 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

19 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

22 hours ago