Drug smuggling case Lingaraj Kanni arrested
ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ. ನಿಷೇಧಿತ 120 ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು.
ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ವೇಳೆ ಲಿಂಗರಾಜ ಕಣ್ಣಿ ಬಳಿ 20 ಬಾಟಲಿಗಳಲ್ಲಿ ನಿಷೇಧಿತ ಕೋಡಿನ್ ಆಧಾರಿತ ಕೆಮ್ಮು ಸಿರಪ್, ಶೆಡ್ಯೂಲ್-ಎಚ್ ಮಾದಕವಸ್ತುಗಳು ಪತ್ತೆಯಾಗಿವೆ. ಈ ಮಾದಕವಸ್ತುಗಳನ್ನು ವಶಪಡಿಸಿಕೊಂಡಿರುವ ಮಹಾರಾಷ್ಟ್ರ ಎಟಿಎಸ್ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…