ಬೆಂಗಳೂರು : ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಎಫ್ಐಆರ್ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂಗೆ ಆರ್ಜಿ ಸಲ್ಲಿಸುತ್ತಿದ್ದು, ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಪ್ರಶಾಂತ್ ರಂಕ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಎರಡು ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲಾಗುವುದು. ಇದಕ್ಕೆ ಗೃಹ ಹಾಗೂ ಕಾನೂನು ಇಲಾಖೆಯ ಸಮ್ಮತಿಯೂ ಇದೆ ಎಂದು ಸಿಸಿಬಿ ಪೊಲೀಸ್ ಮೂಲಗಳು ತಿಳಿಸಿವೆ.
ಸಿಸಿಬಿ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಹೇಳಿಕೆ ಹಾಗೂ ಸಾಕ್ಷಿಗಳ ಹೇಳಿಕೆ ಹೊರತುಪಡಿಸಿದರೆ, ಅರ್ಜಿದಾರರು ಪಾರ್ಟಿ ಆಯೋಜಿಸಿದ್ದರು ಅಥವಾ ಡ್ರಗ್ಸ್ ಪೂರೈಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು .
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…