ರಾಜ್ಯ

ಡ್ರಗ್ಸ್‌ ಪೂರೈಕೆ ಆರೋಪ ಪ್ರಕರಣ ; ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ

ಬೆಂಗಳೂರು :‌ ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಎಫ್ಐಆರ್‌ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂಗೆ ಆರ್ಜಿ ಸಲ್ಲಿಸುತ್ತಿದ್ದು, ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಪ್ರಶಾಂತ್‌ ರಂಕ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಎರಡು ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲಾಗುವುದು. ಇದಕ್ಕೆ ಗೃಹ ಹಾಗೂ ಕಾನೂನು ಇಲಾಖೆಯ ಸಮ್ಮತಿಯೂ ಇದೆ ಎಂದು ಸಿಸಿಬಿ ಪೊಲೀಸ್‌ ಮೂಲಗಳು ತಿಳಿಸಿವೆ.

ಸಿಸಿಬಿ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಹೇಳಿಕೆ ಹಾಗೂ ಸಾಕ್ಷಿಗಳ ಹೇಳಿಕೆ ಹೊರತುಪಡಿಸಿದರೆ, ಅರ್ಜಿದಾರರು ಪಾರ್ಟಿ ಆಯೋಜಿಸಿದ್ದರು ಅಥವಾ ಡ್ರಗ್ಸ್‌ ಪೂರೈಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು .

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

14 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

14 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

14 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

14 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

14 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

15 hours ago