Mysore
20
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

nikhil kumaraswamy siddaramaiah

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಗೆ ರಾಜ್ಯ ಸರ್ಕಾರ ದಂಧೆಕೋರರನ್ನು ಬೆಂಬಲಿಸುತ್ತಿದೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಹಚ್ಚಿ ಸುಮಾರು 390 ಕೋಟಿ ರೂ ಮೌಲ್ಯದ 192 ಕೆಜಿ ಡ್ರಗ್ಸ್‌ನನು ಮಹಾರಾಷ್ಟ್ರ ಪೊಲೀಸರ ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಬೆಂಗಳೂರಿನ 3 ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರೂ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗಸ್‌ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!