nikhil kumaraswamy siddaramaiah
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಸರ್ಕಾರ ದಂಧೆಕೋರರನ್ನು ಬೆಂಬಲಿಸುತ್ತಿದೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ ಸುಮಾರು 390 ಕೋಟಿ ರೂ ಮೌಲ್ಯದ 192 ಕೆಜಿ ಡ್ರಗ್ಸ್‌ನನು ಮಹಾರಾಷ್ಟ್ರ ಪೊಲೀಸರ ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಬೆಂಗಳೂರಿನ 3 ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗಸ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…
ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…
ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…