ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬರೋಬ್ಬರಿ 3.16 ಕೋಟಿ ರೂ ಟ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.
ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿಗಳನ್ನು ಸೈಯದ್ ತಾರಿಕ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂದು ಗುರುತಿಸಲಾಗಿದೆ.
ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಮೂರು ಕೆಜಿ 169ಗ್ರಾಂ ಎಂಡಿಎಂಎ ಸೀಜ್ ಮಾಡಲಾಗಿದೆ.
ಹೊಸ ವರ್ಷಾಚರಣೆಗೆ ಡ್ರಗ್ಸ್ ಸರಬರಾಜು ಮಾಡಲಾಗಿತ್ತು ಎಂದು ತಿಳಿದುಬಂದಿದ್ದು, ಇನ್ನೋರ್ವ ಆರೋಪಿ ನೈಜೀರಿಯಾ ಮೂಲದ ಪ್ರಜೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.





