Mysore
21
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

_G Parameshwara-news

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಅವರು ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸ್‌ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಒಂದು ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತು ಪತ್ತೆಯಾಗಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಪೊಲೀಸರು ಮಾತ್ರ ಆ ದಾಳಿಯಲ್ಲಿ ಇರಲಿಲ್ಲ. ನಮ್ಮ ಪೊಲೀಸರು ಇದ್ದರು. ಬೆಂಗಳೂರು ಪೊಲೀಸರು, ಡಿಸಿಪಿಗಳು ಕೂಡ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್‌ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದರು. ಇನ್ನು ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್‌ ಆಗಿದ್ದು, ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.

Tags:
error: Content is protected !!