ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಒಂದು ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಪತ್ತೆಯಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಪೊಲೀಸರು ಮಾತ್ರ ಆ ದಾಳಿಯಲ್ಲಿ ಇರಲಿಲ್ಲ. ನಮ್ಮ ಪೊಲೀಸರು ಇದ್ದರು. ಬೆಂಗಳೂರು ಪೊಲೀಸರು, ಡಿಸಿಪಿಗಳು ಕೂಡ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದರು. ಇನ್ನು ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…