ಬೆಂಗಳೂರು : ಕುಡಿದ ಅಮಲಿನಲ್ಲಿ ಇಬ್ಬರು ಸ್ನೇಹಿತ ನಡುವೆ ಗಲಾಟೆ ನಡೆದಿದ್ದು, ಓರ್ವ ಸ್ನೇಹಿತ ತನ್ನ ಸ್ನೇಹಿತನನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ವಿಶಾಲ್ ಯಾದವ್ ಕೊಲೆಯಾದ ಯುವಕನಾಗಿದ್ದು, ಅಭಿಷೇಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಇಬ್ಬರು ತಲಘಟ್ಟಪುರದ ಅಂಜನಾಪುರದಲ್ಲಿ ನಿರ್ಮಾಣ ಹಂತದ ಕಟ್ಟದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಪಾರ್ಟಿ ಮಾಡುವ ವೇಳೆ ಘಟನೆ ಸಂಭವಿಸಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.