ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ.
ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ.
ಇದನ್ನು ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್ ದಾಖಲು
ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ದಟ್ಟವಾದ ಮೋಡಕವಿದ ವಾತಾವರಣ, ಮಂಜು ಇದ್ದು, ಮೈ ಕೊರೆವ ಚಳಿ ಹೆಚ್ಚಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.





